ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಿಂದ ಕುರುಡು ಕಾಂಚಾಣ, ಗಿಫ್ಟ್ ಪಾಲಿಟಿಕ್ಸ್ ಜೋರಾಗಿದೆ. ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ಅಕ್ರಮ ಹಣ ಸಾಗಾಟ, ಗಿಫ್ಟ್, ಮದ್ಯಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.
ಮತದಾರರನ್ನು ಸೆಳೆಯಲು ಕೊಂಡೊಯ್ಯುತ್ತಿದ್ದ ಕಂತೆ ಕಂತೆ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಸುಲ್ತಾನ್ ಪೇಟೆಯಲ್ಲಿ ನಡೆದಿದೆ.
ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸುಲ್ತಾನ್ ಪೇಟೆ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 5 ಲಕ್ಷ ಹಣ ಪತ್ತೆಯಾಗಿದೆ. ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.