alex Certify BIG NEWS: ಪತ್ನಿ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪತ್ನಿ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಹಾಸನ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮತದಾನ ಚುರುಕುಗೊಂಡಿದೆ. ಬಿಸಲ ಝಳದ ನಡುವೆಯೂ ಜನರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಪತ್ನಿ ಚೆನ್ನಮ್ಮ ಜೊತೆ ಮತಗಟ್ಟೆಗೆ ಆಗಮಿಸಿ ಹಾಸನದಲ್ಲಿ ಮತದಾನ ಮಾಡಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸಿಪುರ ತಾಲೂಕಿನ ಪಡುವಲಹಿಪ್ಪಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದೇವೇಗೌಡ ದಂಪತಿ ಮತದಾನ ಮಾಡಿದರು.

ಮತದಾನದ ಬಳಿಕ ಮಾತನಾಡಿದ ದೇವೇಗೌಡರು, ಎಲ್ಲರೂ ತಮ್ಮ ಅಮೂಲ್ಯಮತವನ್ನು ಚಲಾಯಿಸುವ ಮೂಲಕ ಮತದಾನ ಮಾಡಿ ಎಂದು ಕರೆ ನೀಡಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...