alex Certify BIG NEWS: ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ; ಮಾಜಿ ಸಿಎಂ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಣೆ; ಮಾಜಿ ಸಿಎಂ HDK

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಿಗೆ ಇಂದು ಜೆಡಿಎಸ್ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು.

ಸಭೆ ಬಳಿಕ ಸುದ್ದಿಗೀಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಂಡ್ಯ, ಕೋಲಾರ, ಹಾಸನ ಈ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಲಿದ್ದು, ಸಂಜೆ ವೇಳೆಗೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗುವುದು ಎಂದರು.

ಮೂರು ಕ್ಷೇತ್ರಗಳ ಜೆಡಿಎಸ್ ಮುಖಂಡರೊಂದಿಗೆ ಕೆಲಹೊತ್ತಲ್ಲೇ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಸಭೆಯಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗುವುದು. ಇಂದು ಸಂಜೆ 4 ಅಥವಾ 5 ಗಂಟೆಗೆ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಹೇಳಿದರು.

ಮಂಡ್ಯ, ಕೋಲಾರ, ಹಾಸನ ಈ ಮೂರು ಕ್ಷೇತ್ರಗಳಲ್ಲಿಯೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ದೇಶದಲ್ಲಿ ಮೋದಿ ಪರ ಅಲೆಯಿದೆ. ಹಾಗಾಗಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...