ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರೆಸಾರ್ಟ್ ರಾಜಕಾರಣಕ್ಕೆ ಮುಂದಾಗಿದ್ದಾರೆ. ಇಂದಿನಿಂದ ಮೂರು ದಿನಗಳ ಕಾಲ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೆಚ್.ಡಿ.ಕುಮಾರಸ್ವಾಮಿ ಬೀಡು ಬಿಡಲಿದ್ದಾರೆ.
ಚಿಕ್ಕಮಗಳೂರಿನ ಹನಿ ಡ್ಯೂ ರೆಸಾರ್ಟ್ ನಲ್ಲಿ ಜೆಡಿಎಸ್ ಶಾಸಕರೊಂದಿಗೆ ವಾಸ್ತವ್ಯ ಹೂಡಲಿರುವ ಕುಮಾರಸ್ವಾಮಿ, ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ರಣತಂತ್ರ ರೂಪಿಸಲಿದ್ದಾರೆ.
ಲೋಕಸಭಾ ಚುನಾವಣೆಗಾಗಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಪ್ರಧಾನಿ ಮೋದಿ ಅಲೆ ಹಾಗೂ ಸ್ಥಳೀಯ ನಾಯಕರ ವರ್ಚಸ್ಸಿನಿಂದ 2-3 ಕ್ಷೇತ್ರ ಗೆಲ್ಲುವ ನಿರೀಕ್ಷೆಯಲ್ಲಿದೆ. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಿದೆ. ಅಲ್ಲದೇ ಪ್ರಮುಖವಾಗಿ ಮಂಡ್ಯ ಕ್ಷೇತ್ರವನ್ನು ಟಾರ್ಗೆಟ್ ಮಾಡಿರುವ ಜೆಡಿಎಸ್ ನಾಯಕರು ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ನಿಟ್ಟಿನಲ್ಲಿ ತಂತ್ರ ಹೆಣೆದಿದ್ದಾರೆ.
ಈ ತಂತ್ರಗಾರಿಕೆ ನಿಟ್ಟಿನಲ್ಲಿ ಚಿಕ್ಕಮಗಳೂರಿನ ರೆಸಾರ್ಟ್ ನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕರ ವಾಸ್ತವ್ಯ ಮಹತ್ವದ್ದಾಗಿದೆ. ರೆಸಾರ್ಟ್ ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಶಾಸಕರೊಂದಿಗೆ ಸರಣಿ ಸಭೆ ನಡೆಸಲಿದ್ದಾರೆ.