ಬೆಂಗಳೂರು: ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದನಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಪಾರ ಪ್ರಮಾಣದ ಚಿಹ್ನ, ವಜ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಶೋಧ ಕಾರ್ಯ ನಡೆಸಿದ್ದ ಐಟಿ ಅಧಿಕಾರಿಗಳು ಬರೋಬ್ಬರಿ 16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, 6 ಕೋಇ 45 ಲಕ್ಷ ಮೌಲ್ಯದ ವಜ್ರ ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ 1.33 ಕೋಟಿ ನಗದು ಹಣ ಪತ್ತೆಯಾಗಿದೆ. ಶಕರಪುರದಲ್ಲಿ 3 ಕೋಟಿಗೂ ಅಧಿಕ ಮೌಲ್ಯದ 4 ಕೆಜಿ 400ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಶಾರದಾದೇವಿ ರಸ್ತೆಯಲ್ಲಿ 3 ಕೋಟಿ 39 ಲಕ್ಷ ಮೌಲ್ಯದ 4 ಕೆಜಿ 800 ಗ್ರಾಂ ಮರ್ಕೈಂತಲ್ ಬ್ಯಾಂಕ್ ಬಳಿ 2 ಕೋಟಿ 13 ಲಕ್ಷ ಮೌಲ್ಯದ 3 ಇಎಜಿ 400 ಗ್ರಾಂ ಚಿನ್ನ, ಜಯನಗರ 3ನೇ ಬ್ಲಾಕ್ ಬಳಿ 5 ಕೋಟಿ 33 ಲಕ್ಷ ಮೌಲ್ಯದ 7 ಕೆಜಿ 598 ಗ್ರಾಂ, ಸಾರಸ್ವತ ಬ್ಯಾಂಕ್, ಚಾಮರಾಜಪೇಟೆಯಲ್ಲಿ 84 ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ವಶಕ್ಕೆ ಪಡೆಯಲಾಗಿದೆ.
ಜಯನಗರದಲ್ಲಿ 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆಯಾಗಿದೆ. ಒಟ್ಟು ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಬರೋಬ್ಬರಿ 22 ಕೆಜಿ ಚಿಹ್ನ, 6 ಕೋಟಿ ಮೌಲ್ಯದ ವಜ್ರ ಜಪ್ತಿ ಮಾಡಲಾಗಿದೆ.