ಲೋಕಸಭಾ ಚುನಾವಣೆಗೆ ಕೋಲಾರ ಕಾಂಗ್ರೆಸ್ ಟಿಕೆಟ್ಗಾಗಿ ಬಣ ಬಡಿದಾಟ ಆರಂಭವಾಗಿತ್ತು. ಸಚಿವ ಕೆ.ಹೆಚ್.ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಗಳ ನಡುವೆ ಪೈಪೋಟಿ ಆರಂಭವಾಗಿತ್ತು. ಇದೀಗ ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ ಎಂಬಂತೆ ಎಐಸಿಸಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
ಕೆ.ವಿ.ಗೌತಮ್ ಗೆ ಕೋಲಾರ ಲೋಕಸಭಾ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದೆ. ಈ ಮೂಲಕ ಕೋಲಾರ ಕಾಂಗ್ರೆಸ್ ಬಂಡಾಯ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ನೀಡಿದೆ.
ಕೆ.ಹೆಚ್.ಮುನಿಯಪ್ಪ, ರಮೇಶ್ ಕುಮಾರ್ ಇಬ್ಬರೂ ಬಣದವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಲಾಗಿದ್ದು, ಹೊಸ ಅಭ್ಯರ್ಥಿ ಕೆ.ವಿ.ಗೌತಮ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಈ ಮೂಲಕ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಎರಡೂ ಬಣದವರು ಒಗ್ಗಟ್ಟಿನಿಂದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ಕೆಲಸ ಮಾಡಿ ಗೆಲ್ಲಿಸುವ ಅನಿವಾರ್ಯತೆ ಎದುರಾಗಿದೆ.