
ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಗ್ಗಂಟಾಗಿದ್ದು, ಭಿನ್ನಮತ ಸ್ಫೋಟಗೊಂಡಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಸಂಧಾನ ಸಭೆ ನಡೆಸಿದರೂ ಕೈ ನಾಯಕರ ಅಸಮಾಧಾನ ಶಮನವಾಗಿಲ್ಲ.
ಸಚಿವ ಕೆ.ಹೆಚ್.ಮುನಿಯಪ್ಪ ಕುಟುಂಬಕ್ಕೆ ಟಿಕೆಟ್ ನೀಡಿದರೆ ಜಿಲ್ಲೆಯ ಐವರು ಶಾಸಕರು ರಾಜೀನಾಮೆ ನೀಡಿವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್, ಮುನಿಯಪ್ಪ ಕುಟುಂಬಕ್ಕೆ ಲೋಕಸಭಾ ಟಿಕೆಟ್ ಕೊಟ್ಟರೆ ನಾವು ಐದು ಶಾಸಕರು ರಾಜೀನಾಮೆ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಶಾಸಕರ ಬೆದರಿಕೆ ಹಿನ್ನೆಲೆಯಲ್ಲಿ ಕೋಲಾರ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.