ತುಮಕೂರು: ಲೋಕಸಭಾ ಚುನಾವಣಾ ಕಣ ರಂಗೇರಿದೆ. ಅದರಲ್ಲಿಯೂ ತುಮಕೂರು ಲೋಕಸಭಾ ಅಖಾಡ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ತುಮಕೂರು ಲೋಕಸಭಾಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಜಿ.ಮಾಧುಸ್ವಾಮಿಗೆ ಟಿಕೆಟ್ ಕೈತಪ್ಪಿದೆ. ತುಮಕೂರು ಕ್ಷೇತ್ರಕ್ಕೆ ಮಾಜಿ ಸಚಿವ ವಿ.ಸೋಮಣ್ಣಗೆ ಟಿಕೆಟ್ ನೀಡಿರುವುದಕ್ಕೆ ಮಾಧುಸ್ವಾಮಿ ಅಸಮಾಧನಗೊಂಡಿದ್ದು, ಪ್ರಚಾರ ಕಾರ್ಯಕ್ಕೂ ಸೋಮಣ್ಣ ಜೊತೆ ತೆರಳುತ್ತಿಲ್ಲ. ಅಲ್ಲದೇ ಸೋಮಣ್ಣ ವಿರುದ್ಧ ಮಾಧುಸ್ವಾಮಿ ಕೆಲ ದಿನಗಳ ಹಿಂದೆ ಪರೋಕ್ಷ ವಾಗ್ದಾಳಿ ನಡೆಸಿದ್ದರು.
ಇದೀಗ ಮಾಧುಸ್ವಾಮಿ, ತುಮಕೂರು ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಅವರನ್ನು ಭೇಟಿಯಾಗಿದ್ದಾರೆ. ಸೋಮಣ್ಣ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಮಾಧುಸ್ವಾಮಿ ಮುದ್ದಹನುಮೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿ ನಯಕನ ನಡೆ ಅಚ್ಚರಿಗೆ ಕಾರಣವಾಗಿದೆ.