
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಲ್ಲೆಡೆ ಕಟ್ಟೆಚ್ಚರ ವಹಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ರೌಡಿಗಳು, ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರು ಉತ್ತರ ವಿಭಾಗದ ಪೊಲೀಸರು ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ರಾಜಗೋಪಾಲನಗರ, ಆರ್ ಎಂ ಸಿ ಯಾರ್ಡ್, ಪೀಣ್ಯ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.
ಬೆಂಗಳೂರಿನ 290 ಕಡೆಗಳಲ್ಲಿ 50 ಪೊಲೀಸರ ತಂಡ ತಡರಾತ್ರಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.