ನವದೆಹಲಿ: ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಸರ್ವ ಸನ್ನದ್ಧವಾಗಿದ್ದು, ಪಾರದರ್ಶಕ, ನ್ಯಾಯ ಸಮ್ಮತವಾಗಿ ಮತದಾನ ನಡೆಯುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಚುನಾವಣಾ ಆಯುಕ್ತರು, ಈ ಬಾರಿ ದೇಶದಲ್ಲಿ 1.8 ಕೋಟಿ ಮತದಾರರು ಮೊದಲಬಾರಿ ಮತ ಚಲಾಯಿಸಲಿದ್ದಾರೆ ಎಂದರು.
49.7 ಕೋಟಿ ಪುರುಷ ಮತದಾರರು, 47.1 ಕೋಟಿ ಮಹಿಳಾ ಮತದಾರರು, 48 ಸಾವಿರ ತೃತೀಯಲಿಂಗಿ ಮತದಾರರು ಇದ್ದಾರೆ. 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತಚಲಾಯಿಸಲಿದ್ದಾರೆ. ಇನ್ನು 19.74 ಕೋಟಿ ಯುವ ಮತದಾರರು ಮತದಾನ ಮಾಡಲಿದ್ದಾರೆ ಎಂದು ವಿವರಿಸಿದರು.