alex Certify BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಸಭಾ ಚುನಾವಣೆ ಸ್ಪರ್ಧೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಲೋಕೋಪಯೋಗಿ ಸಚಿವ ಸತೀಶ್ ಜರಕಿಹೊಳಿ ಈ ಬಾರಿ ಲೋಕಸಭಾ ಚುನವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಸ್ವತಃ ಸಚಿವರೇ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಲ್ಲ, ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದರು.

ಬೆಳಗಾವಿ, ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲಿಯೂ ನಾನಾಗಲಿ, ನನ್ನ ಕುಟುಂಬದಿಂದಾಗಲಿ ಯಾರೂ ಸ್ಪರ್ಧಿಸಲ್ಲ. ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತದೆ ನೋಡೋಣ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...