ಚಿಕ್ಕಬಳ್ಳಾಪುರ: ಲೋಕಸಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಬಿರು ಬಿಸಿಲಿನ ನಡುವೆಯೂ ಮತದಾರರು ಉತ್ಸಾಹದಲ್ಲಿಯೇ ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಒಂದೇ ಕುಟುಂಬದ 90 ಸದಸ್ಯರು ಮತಗಟ್ಟೆಗೆ ಆಗಮಿಸಿ ಮತಚಲಾಯಿಸಿದ್ದು ವಿಶೇಷವಾಗಿತ್ತು. ಚಿಕ್ಕಬಳ್ಳಾಪುರದ ಮತಗಟ್ಟೆ ಸಂಖ್ಯೆ 161 ರಲ್ಲಿ ಬಾದಾಮ್ ಫ್ಯಾಮಿಲಿಯ 90 ಸದಸ್ಯರು ಮತದಾನ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ನಗರದ ವಾರ್ಡ್ ನಂ.19ರಲ್ಲಿ ಬಾದಾಮ್ ಫ್ಯಾಮಿಲಿ ಕುಟುಂಬ ವಾಸವಾಗಿದ್ದು, ಎಲ್ಲರೂ ಒಟ್ಟಾಗಿ ಬಂದು ಮತದಾನ ಮಡಿದ್ದು ವಿಶೇಷ.