ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಸೇರಿದಂತೆ ಹಲವು ವಸ್ತುಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಈವರೆಗೆ ರಾಜ್ಯದಲ್ಲಿ 20.85 ಕೋಟಿ ರೂಪಾಯಿ ನಗದು ಮತ್ತು 27 ಕೋಟಿ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ. 211.23 ಕೆಜಿ ಮಾದಕ ವಸ್ತುಗಳು, 9 ಕೋಟಿಗೂ ಅಧಿಕ ಮೌಲ್ಯದ ಚಿನ್ನ, 59.04 ಕೆಜಿ ಬೆಳ್ಳಿ ಹಾಗೂ 9 ಲಕ್ಷ ಮೌಲ್ಯದ 21.17 ಕ್ಯಾರೆಟ್ ವಜ್ರ ವಶಕ್ಕೆ ಪಡೆಯಲಾಗಿದೆ.
ಕರ್ನಾಟಕದಲ್ಲಿ ಇಲ್ಲಿಯವರೆಗೆ ಒಟ್ಟು 62.42 ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.