![](https://kannadadunia.com/wp-content/uploads/2022/09/x1-siddaramaiah-1523079478.jpg.pagespeed.ic_.MzXSzsBbC2.jpg)
ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಭಾರಿ ಸಿದ್ಧತೆ ನಡೆಸಿದ್ದು, ಮಾಜಿ ಸಿಎಂ, ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಮನೆಗೆ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಲೋಕಸಭಾ ಟಿಕೆಟ್ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.
ಜಗದೀಶ್ ಶೆಟ್ಟರ್ ಭೇಟಿ ವೇಳೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಲೋಕಸಭಾ ಟಿಕೆಟ್ ವಿಚಾರವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಅಭಿಪ್ರಾಯ ಕೇಳುತ್ತಿದ್ದೇವೆ. ಶೆಟ್ಟರ್ ಅವರನ್ನೂ ಆಕಾಂಕ್ಷಿ ಅಂದುಕೊಂಡಿದ್ದೇವೆ ಎಂದರು.
ಈ ವೇಳೆ ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ನಾನು ಆಕಾಂಕ್ಷಿ ಅಲ್ಲ ಎಂದು ಹೇಳಿದರು. ಶಾಸಕರು, ಕಾರ್ಯಕರ್ತರು ಯಾರಿಗೆ ಹೇಳುತ್ತಾರೋ ಅವರಿಗೆ ಟಿಕೆಟ್ ನೀಡಲಾಗುತ್ತದೆ. ಪ್ರತಿ ಜಿಲ್ಲೆಯಲ್ಲಿಯೂ ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡುತ್ತೇವೆ ಎಂದು ಸಿಎಂ ತಿಳಿದಿದರು.