ಮೈಸೂರು: ಲೋಕಸಭಾ ಕಲಾಪದ ವೇಳೆ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಮನೋರಂಜನ್ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ.
ಆರೋಪಿ ಮನೋರಂಜನ್ ಕುಟುಂಬ ಮೈಸೂರಿನಲ್ಲಿ ವಾಸವಿದ್ದು, ಗುಪ್ತಚರ ಇಲಾಖೆ ಅಧಿಕಾರಿಗಳು ಆರೋಪಿ ನಿವಾಸಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿವೆ. ಮನೋರಂಜನ್ ಕುಟುಂಬಕ್ಕೆ ಮೈಸೂರು ಬಿಟ್ಟು ಎಲ್ಲೂ ಹೋಗದಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ನಮ್ಮ ಮುಂದಿನ ಸೂಚನೆ ಬರುವವರೆಗೂ ಮೈಸೂರಿನಿಂದ ಹೊರಗಡೆ ತೆರಳುವಂತಿಲ್ಲ. ತೀರಾ ತುರ್ತು ಸ್ಥಿತಿ ಇದ್ದರೆ ನಮ್ಮ ಗಮನಕ್ಕೆ ತಂದು ಅನುಮತಿ ಮೇರೆಗೆ ತೆರಳಬಹುದು ಎಂದು ತಿಳಿಸಿದ್ದಾರೆ.
ಅಲ್ಲದೇ ಪ್ರತಿನಿತ್ಯ ನಿಮಗೆ ಬರುವ ಕರೆಗಳ ಬಗ್ಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಎಲ್ಲಾ ಕರೆಗಳನ್ನು ಸ್ವೀಕರಿಸಬೇಕು ಎಂದು ಗುಪ್ತಚರ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ.