BREAKING NEWS: ಲೋಕಸಭಾ ಚುನಾವಣೆ: ಅಹಮದಾಬಾದ್ ನಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

ಅಹಮದಾಬಾದ್: ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ಇಂದು ದೇಶದಲ್ಲಿ 3ನೇ ಹಂತದ ಮತದಾನ ನಡೆಯುತ್ತಿದ್ದು, ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಉತ್ಸಾಹದಲ್ಲಿ ಮತದಾನ ಮಾಡುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನ ಅಹಮದಾಬಾದ್ ನಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಅಹಮದಾಬಾದ್ ನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಧಾನಿ ಮೋದಿಯವರಿಗೆ ಸಾಥ್ ನೀಡಿದರು.

ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಹಂತದಲ್ಲಿ ಎಲ್ಲರೂ ದಾಖಲೆ ಪ್ರಮಾಣದಲ್ಲಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸಿ. ಮತದಾರರ ಸಕ್ರಿಯ ಭಾಗವಹಿಸುವಿಕೆ ನಿಜಕ್ಕೂ ಚುನವಣೆಯನ್ನು ಮತ್ತಷ್ಟು ರೋಮಾಂಚನಗೊಳಿಸುತ್ತದೆ ಎಂದು ಕರೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read