ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್.ಜಿ. ರಮೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ.
ಬೆಸ್ಕಾಂ ಮುಖ್ಯ ಇಂಜಿನಿಯರ್ ಹೆಚ್.ಜಿ. ರಮೇಶ್ ಅವರ ಮನೆ ಸೇರಿ ಸಂಬಂಧಿತ ನಾಲ್ಕು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. 1.40 ಕೋಟಿ ರೂಪಾಯಿ ಮೌಲ್ಯದ ಒಂದು ದ್ವಿಚಕ್ರ ವಾಹನ, ಒಂದು ಕಾರ್, ಗೃಹಪಯೋಗಿ ವಸ್ತುಗಳು, ವಿದೇಶಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ.
ಏರೋ ಸ್ಪೇಸ್ ಪಾರ್ಕ್ ಇಂಡಸ್ಟ್ರಿಯಲ್ ಏರಿಯಾದಲ್ಲಿ ಒಂದು ಫ್ಲ್ಯಾಟ್, ಡಾಬಸ್ ಪೇಟೆಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಭೂಮಿ ಪತ್ತೆಯಾಗಿದೆ. ಬಸವೇಶ್ವರನಗರದ ನಿರ್ಮಾಣ ಹಂತದ ಕಟ್ಟಡ ಸೇರಿ ಒಟ್ಟು 5.60 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.