ಕೋಲಾರ: ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, 2,000 ರೂ. ಲಂಚ ಸ್ವೀಕರಿಸುತ್ತಿದ್ದ ಪ್ರಥಮ ದರ್ಜೆ ಸಹಾಯ ತೇಜಸ್ ಭೂಷಣ್ ಬಲೆಗೆ ಬಿದ್ದಿದ್ದಾರೆ.
2022ರಲ್ಲಿ ಮಳೆಯಿಂದ ಕುಸಿದಿದ್ದ ಮನೆಗೆ ಪರಿಹಾರ ನೀಡಲು ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ಗೊಲ್ಲಹಳ್ಳಿಯ ನಾರಾಯಣಸ್ವಾಮಿಯವರ ಬಳಿ 5,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ರಾಜೀವ್ ಗಾಂಧಿ ವಸತಿ ನಿಗಮಕ್ಕೆ ನಾರಾಯಣಸ್ವಾಮಿ ಅರ್ಜಿ ಸಲ್ಲಿಸಿದ್ದು, ಮೊದಲ ಕಂತಿನ 90,000 ರೂ. ಬಿಡುಗಡೆಗೆ ತೇಜಸ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು 2000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.