alex Certify ರಾತ್ರಿ ಮನೆಯಲ್ಲೇ ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿ ಮನೆಯಲ್ಲೇ ಲಂಚ ಸ್ವೀಕರಿಸುತ್ತಿದ್ದ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

ಬೆಳಗಾವಿ: ಕಿತ್ತೂರು ತಹಶೀಲ್ದಾರ್ ಹಾಗೂ ಗುಮಾಸ್ತ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ತಹಶೀಲ್ದಾರ್ ಮತ್ತು ಗುಮಾಸ್ತ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. 10 ಎಕರೆ ಜಮೀನಿನ ಖಾತೆ ಬದಲಾವಣೆಗಾಗಿ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಖೋದನಾಪುರದ ರಾಜೇಂದ್ರ ನಾಮದಾರ ಬಳಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ತಂದೆ ಹೆಸರಿನಲ್ಲಿದ್ದ ಜಮೀನನ್ನು ತನ್ನ ಹೆಸರಿಗೆ ಖಾತೆ ಬದಲಾವಣೆ ಕೋರಿ ರಾಜೇಂದ್ರ ಅರ್ಜಿ ಸಲ್ಲಿಸಿದ್ದು, ನಿನ್ನೆ ರಾತ್ರಿ ತಹಶೀಲ್ದಾರ್ ಮನೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.

ಎರಡು ಲಕ್ಷ ರೂಪಾಯಿ ಹಣ ಮತ್ತು ಖಾಲಿ ಚೆಕ್ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ರಾಜೇಂದ್ರ ಬೆಳಗಾವಿ ಲೋಕಾಯುಕ್ತ ಠಾಣೆಗೆ ದೂರು ನೀಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...