
ಬಳ್ಳಾರಿಯಲ್ಲಿ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿ ಮೊತ್ತ 30 ಲಕ್ಷ ರೂಪಾಯಿ ಪಾವತಿಸಲು 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು ಸ್ವೀಕರಿಸುತ್ತಿದ್ದರು.
ಅವರು ಕಚೇರಿಯಲ್ಲಿ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಬಳ್ಳಾರಿ ನಗರದ ವಿಮ್ಸ್ ಆಸ್ಪತ್ರೆ ಪಕ್ಕದಲ್ಲಿರುವ ಸಣ್ಣ ನೀರಾವರಿ ಇಲಾಖೆ ಕಚೇರಿಯಲ್ಲಿ ಇಂಜಿನಿಯರ್ ನಾಗರಾಜ್ ಲಂಚ ಪಡೆಯುವಾಗ ಬಳ್ಳಾರಿ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.