ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆ ಜುಲೈ 31ಕ್ಕೆ ಮುಕ್ತಾಯವಾಗಿದೆ. ಹೀಗಿದ್ದರೂ ತೆರೆ ಮರೆಯಲ್ಲಿ ಅಲ್ಲೊಂದು ಇಲ್ಲೊಂದು ವರ್ಗಾವಣೆ ನಡೆಯುತ್ತಿವೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕೆಲವು ವರ್ಗಾವಣೆ ನಡೆದರೆ, ಮತ್ತೆ ಕೆಲವು ವರ್ಗಾವಣೆಗಳು ಹಳೆಯ ದಿನಾಂಕ ಬಳಸಿ ನಡೆಯುತ್ತಿವೆ ಎಂದು ಹೇಳಲಾಗಿದೆ. ಈ ನಡುವೆ ಬೆಂಗಳೂರು ಜಲ ಮಂಡಳಿಯಲ್ಲಿ ವರ್ಗಾವಣೆ ಅವಧಿ ಮುಗಿದ ನಂತರ 200ಕ್ಕೂ ಹೆಚ್ಚು ನೌಕರರನ್ನು ನಿಯಮ ಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ವರ್ಗಾವಣೆಯಲ್ಲಿ ಸಜನ ಪಕ್ಷಪಾತ, ಭ್ರಷ್ಟಾಚಾರ ನಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತ ಮರಿಲಿಂಗಗೌಡ ಮಾಲಿ ಪಾಟೀಲ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದು, ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.