ಬೆಂಗಳೂರು: ಪ್ರಕರಣವೊಂದರಲ್ಲಿ ಆರೋಪಿತ ದಂಪತಿಯನ್ನು ಬಂಧಿಸದಿರಲು 50,000 ಲಕ್ಷ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಕೆ ಆರ್ ಪುರಂ ಪೊಲೀಸ್ ಇನ್ಸ್ ಪೆಕ್ಟರ್ ವಜ್ರಮುನಿ ಕೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಲೋಕಾಯುಕ್ತ ಕೋರ್ಟ್, ಪೊಲೀಸ್ ಠಾಣೆಗಳು ವ್ಯಾಪಾರ ಕೇಂದ್ರಗಳಾಗಿವೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದೆ.
ಪೊಲೀಸ್ ಠಾಣೆಗಳಲ್ಲಿನ ಇಂತಹ ಸ್ಥಿತಿಯಿಂದಾಗಿ ಸಾಮಾನ್ಯ ಜನರು ವ್ಯವಸ್ಥೆ ಮೇಲಿನ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದೆ. ಪೊಲೀಸರು ವಿನಮ್ರರು, ಪ್ರಾಮಾಣಿಕರರಾಗಿ ಸೇವಾಮನೋಭಾವದಿಂದ ಅಮಾಯಕರನ್ನು ರಕ್ಷಿಸಬೇಕು. ಆದರೆ ದುರದೃಷ್ಟವಶಾತ್ ಭ್ರಷ್ಟಾಚಾರಗಳಿಂದಾಗಿ ಪೊಲೀಸ್ ಠಾಣೆಗಳು ವ್ಯಾಪಾರ ಕೇಂದ್ರಗಳಾಗಿವೆ. ಇದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ.
ಅಸಹಾಯಕ ಹಾಗೂ ಬಡ ಪೊಲೀಸ್ ಸಿಬ್ಬಂದಿ ಅಧಿಕಾರಿಗಳಿಗೆ ಬಲಿಪಶುಗಳಾಗುವ ಸಾಧ್ಯತೆ ಇದೆ ಎಂದು ಲೋಕಾಯುಕ್ತ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದೇ ವೇಳೆ ಇನ್ಸ್ ಪೆಕ್ಟರ್ ವಜ್ರಮುನಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.