ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳಾ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 5 ಲಕ್ಷ ರೂ. ಸ್ವೀಕರಿಸುತ್ತಿದ್ದ ವಿಶೇಷ ತಹಶೀಲ್ದಾರ್ ವರ್ಷಾ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರಿನ ಕಂದಾಯ ಭವನದ ಕಚೇರಿಯಲ್ಲೇ ಲಂಚ ಸ್ವೀಕರಿಸುವಾಗಲೇ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಖಾತೆ ಮಾಡಿಸುವ ವಿಚಾರವಾಗಿ ವಿಶೇಷ ತಹಶೀಲ್ದಾರ್ ವರ್ಷಾ ಒಡೆಯರ್ 5 ಲಕ್ಷ ರೂ. ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.