
ಬೆಂಗಳೂರು: ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಪೊಲೀಸರು ಅವರ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯ ಕೈಗೊಂಡಿದ್ದಾರೆ.
7 ಡಿವೈಎಸ್ಪಿಗಳ ನೇತೃತ್ವದ ತಂಡ ಶಾಸಕರಿಗಾಗಿ ಹುಡುಕಾಟ ನಡೆಸಿದೆ. ಪ್ರಕರಣದಲ್ಲಿ ವಿರೂಪಾಕ್ಷಪ್ಪ ಮೊದಲನೆ ಆರೋಪಿಯಾಗಿದ್ದು, ಶಾಸಕರ ಪತ್ತೆಗೆ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ ಲೋಕಾಯುಕ್ತ ಪೊಲೀಸರ ತಂಡ ವಿವಿಧೆಡೆ ಶೋಧ ಕಾರ್ಯ ನಡೆಸಿದೆ. ಬೆಂಗಳೂರು, ದಾವಣಗೆರೆ ಮೊದಲಾದ ಕಡೆ ಹುಡುಕಾಟ ನಡೆಸಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಲೋಕಾಯುಕ್ತ ಪೊಲೀಸರು ಮುಂದಾಗಿದ್ದಾರೆ.