ಮುಡಾ ಸೈಟ್ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸಂಬಂಧಿಸಿದ ಆರೋಪಗಳ ತನಿಖೆಗಾಗಿ ಕರ್ನಾಟಕ ಲೋಕಾಯುಕ್ತ ತಂಡ ಇಂದು ಮೈಸೂರಿನ ವಿವಾದಿತ ಸ್ಥಳಕ್ಕೆ ಆಗಮಿಸಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪಾರ್ವತಿಗೆ 14 ನಿವೇಶನಗಳನ್ನು ಹಂಚಿಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.ಈ ಪ್ರಕರಣದ ದೂರುದಾರರಾದ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣಅವರನ್ನು ಲೋಕಾಯುಕ್ತ ಅಧಿಕಾರಿಗಳು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.
ನಿವೇಶನಗಳ ಮಾಲೀಕತ್ವವನ್ನು ಬಿಟ್ಟುಕೊಡುವ ತಮ್ಮ ಪತ್ನಿಯ ನಿರ್ಧಾರದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದ್ವೇಷದ ರಾಜಕಾರಣಕ್ಕೆ ಅವರು ಬಲಿಯಾಗಿದ್ದಾರೆ ಎಂದು ಹೇಳಿದ್ದಾರೆ.
“ಮೈಸೂರಿನಲ್ಲಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಭೂಸ್ವಾಧೀನ ನಡೆಸದೆ ವಶಪಡಿಸಿಕೊಂಡ ಭೂಮಿಗೆ ಪರಿಹಾರದ ರೂಪದಲ್ಲಿ ನೀಡಿದ ಭೂಮಿಯನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ” ಎಂದು ಅವರು ಪೋಸ್ಟ್ನಲ್ಲಿ ತಿಳಿಸಿದ್ದಾರೆ.