alex Certify 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ನಗರದ ಎಪಿಎಂಸಿ ಕಾರ್ಯದರ್ಶಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಸೋಮವಾರ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.

ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಲೈಸೆನ್ಸ್ ಕೇಸ್ ವರ್ಕರ್ ಯೋಗೇಶ್ ಬಂಧಿತರು. ಎಪಿಎಂಸಿಯಲ್ಲಿ ಮಳಿಗೆಗಳಿಗಾಗಿ ರವೀಂದ್ರ ನೇರಳೆ ಅರ್ಜಿ ಸಲ್ಲಿಸಿದ್ದು, ಇದಕ್ಕಾಗಿ ಕಾರ್ಯದರ್ಶಿ ಭೇಟಿ ಮಾಡಿದಾಗ ಒಂದು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೇಸ್ ವರ್ಕರ್ ಗೆ ಹಣ ಕೊಡುವಂತೆ ತಿಳಿಸಿದ್ದು, ಲಂಚದ ಹಣದಲ್ಲಿ ಮುಂಗಡವಾಗಿ 50,000 ರೂ. ಸ್ವೀಕರಿಸುವಾಗ ಲೋಕಾಯುಕ್ತ ಡಿ.ವೈ.ಎಸ್.ಪಿ. ಉಮೇಶ್ ಈಶ್ವರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ಲಂಚದ ಹಣದ ಸಹಿತ ಇಬ್ಬರನ್ನು ಬಂಧಿಸಲಾಗಿದೆ. ದಾಳಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪಿಐ ಸುರೇಶ್, ಸಿಬ್ಬಂದಿ ಮಹಾಂತೇಶ್, ಸುರೇಂದ್ರ, ಯೋಗೇಶ್, ಚನ್ನೇಶ್, ಪ್ರಶಾಂತ್ ಕುಮಾರ್, ಅರುಣ್ ಕುಮಾರ್, ದೇವರಾಜ್, ರಘು ನಾಯ್ಕ, ಪುಟ್ಟಮ್ಮ, ಜಯಂತ್, ವಿ. ಗೋಪಿ, ಪ್ರದೀಪ್ ಕುಮಾರ್ ಭಾಗವಹಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...