ಬೀದರ್: ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಚಾರ್ಯ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪ್ರಾಚಾರ್ಯ ಶಂಕರ ಜೋಗೆ 25,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಯಲ್ಲದಗುಂಡಿ ಗ್ರಾಮದ ನಾಗನಾಥ ಪೂಜಾರಿ ಅವರ ಮಗನ ಆರನೇ ತರಗತಿ ಪ್ರವೇಶಕ್ಕೆ ಪ್ರಾಚಾರ್ಯ ಶಂಕರ 40,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತಾಗಿ ನಾಗನಾಥ ಪೂಜಾರಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಗುರುವಾರ 25 ಸಾವಿರ ರೂ. ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.