ಬೆಂಗಳೂರು: ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೆಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹೆಡ್ ಕಾನ್ಸ್ ಟೆಬಲ್ ಕವೀಶ್ ಲೋಕಾಯುಕ್ತ ಬಲೆಗೆ ಬಿದ್ದವರು. 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಪ್ತಿ ಮಾಡಿದ್ದ ವಾಹನ ಬಿಡುಗಡೆಗೆ ಕವೀಶ್ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಾರೆ. ಬೆಂಗಳೂರು ನಗರ ಲೋಕಾಯುಕ್ತ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.