alex Certify ಲಂಚ ಸ್ವೀಕರಿಸಿ ಪರಾರಿಯಾಗ್ತಿದ್ದ ಇಂಜಿನಿಯರ್ ಗಳನ್ನು ಅಟ್ಟಾಡಿಸಿಕೊಂಡು ಹೋಗಿ ಹಿಡಿದ ಲೋಕಾಯುಕ್ತ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಸ್ವೀಕರಿಸಿ ಪರಾರಿಯಾಗ್ತಿದ್ದ ಇಂಜಿನಿಯರ್ ಗಳನ್ನು ಅಟ್ಟಾಡಿಸಿಕೊಂಡು ಹೋಗಿ ಹಿಡಿದ ಲೋಕಾಯುಕ್ತ ಪೊಲೀಸರು

ಚಾಮರಾಜನಗರ: ಚಾಮರಾಜನಗರದಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕೋಪಯೋಗಿ ಇಲಾಖೆಯ ಎಇಇ ಕೆಂಪರಾಜು ಮತ್ತು ಎಇ ಮಧುಸೂಧನ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ. ರಸ್ತೆ ಕಾಮಗಾರಿ ಹಣ ಬಿಡುಗಡೆ ಮಾಡಲು ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಚಾಮರಾಜನಗರ ತಾಲೂಕಿನ ಬಾಗಳಿ ಗ್ರಾಮದ ಬಳಿ ಲಂಚ ಸ್ವೀಕರಿಸುವಾಗ ದಾಳಿ ಮಾಡಲಾಗಿದೆ.

ಪಿ.ಡಬ್ಲ್ಯೂ.ಡಿ. ಇಂಜಿನಿಯರ್ ಗಳು 30 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದರು. ದಾಳಿ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದವರನ್ನು ಲೋಕಾಯುಕ್ತರು ಅಟ್ಟಾಡಿಸಿಕೊಂಡು ಹೋಗಿ ಹಿಡಿದಿದ್ದಾರೆ. ಲೋಕಾಯುಕ್ತ ಡಿ.ವೈ.ಎಸ್.ಪಿ. ಮ್ಯಾಥ್ಯೂ ಥಾಮಸ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...