ಕಲಬುರಗಿ : ಮೂರು ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯ ಬಿಜಾಪುರ ಕ್ರಾಸ್ ಬಳಿ ನಡೆದಿದೆ.
ಬಾಬುರಾವ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಮೂರು ಸಾವಿರ ರೂಪಾಯಿ ಲಂಚದ ಹಣವನ್ನು ಸ್ವೀಕರಿಸುವ ವೇಳೆ ದಾಳಿ ನಡೆಸಿ ಬಿಲ್ ಕಲೆಕ್ಟರ್ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜೀವ್ ಗಾಂಧಿ ಅವಸ್ ಯೋಜನೆ ಅಡಿಯಲ್ಲಿ ಮನೆ ಜಿಪಿಎಸ್ ಗೆ ಬಂಧಿತ ಬಿಲ್ ಕಲೆಕ್ಟರ್ ಬಾಬುರಾವ್ 3 ಸಾವಿರ ಲಂಚಕ್ಕೆ ಬೇಡಿಕೆಯೊಡ್ಡಿದ್ದರು. ತೆ. ಈ ಸಂಬಂಧ ನಾಗಣ್ಣಗೌಡ ಎಂಬವರು ಲೋಕಾಯುಕ್ತರಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಲೋಕಾಯುಕ್ತ ಅಧಿಕಾರಿಗಳು ಆರೋಪಿಯನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.