
ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಿವೇಶನದ ಇ-ಸ್ವತ್ತು ಮಾಡಿಕೊಡಲು ಮಹಮ್ಮದ್ ಅತಿಬ್ ಎಂಬುವರ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟು 10,000 ರೂ. ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.
ಹಿರೇಕೆರೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪಂಪಾಪತಿ ನಾಯಕ್ ಲೋಕಾಯುಕ್ತ ಬಲಗೆ ಬಿದ್ದವರು. ಅವರು ಲಂಚ ಪಡೆಯುವಾಗ ಲೋಕಾಯುಕ್ತ ಡಿ.ವೈ.ಎಸ್.ಪಿ. ಬಿ.ಪಿ. ಚಂದ್ರಶೇಖರ್, ಆಂಜನೇಯ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.