alex Certify 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿ ಅರೆಸ್ಟ್

ಹಾವೇರಿ: ಹಾವೇರಿ ಜಿಲ್ಲೆ ಹಿರೇಕೆರೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ನಿವೇಶನದ ಇ-ಸ್ವತ್ತು ಮಾಡಿಕೊಡಲು ಮಹಮ್ಮದ್ ಅತಿಬ್ ಎಂಬುವರ ಮೂಲಕ ಲಂಚಕ್ಕೆ ಬೇಡಿಕೆ ಇಟ್ಟು 10,000 ರೂ. ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.

ಹಿರೇಕೆರೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪಂಪಾಪತಿ ನಾಯಕ್ ಲೋಕಾಯುಕ್ತ ಬಲಗೆ ಬಿದ್ದವರು. ಅವರು ಲಂಚ ಪಡೆಯುವಾಗ ಲೋಕಾಯುಕ್ತ ಡಿ.ವೈ.ಎಸ್.ಪಿ. ಬಿ.ಪಿ. ಚಂದ್ರಶೇಖರ್, ಆಂಜನೇಯ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...