ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ದಾರದಹಳ್ಳಿ ಮೆಸ್ಕಾಂ ಉಪ ವಿಭಾಗದ ಕಿರಿಯ ಇಂಜಿನಿಯರ್ ಮಂಜುನಾಥ್ ಲಂಚದ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ವಿದ್ಯುತ್ ಸಂಪರ್ಕ ಕಾಮಗಾರಿಗೆ ಅನುಮೋದನೆ ನೀಡಲು 25,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಜುನಾಥ್ ವಿರುದ್ಧ ಗುತ್ತಿಗೆದಾರ ಉಮೇಶ್ ದೂರು ನೀಡಿದ್ದರು. ಶುಕ್ರವಾರ ಬೆಳಗ್ಗೆ ಮೂಡಿಗೆರೆ ಮೆಸ್ಕಾಂ ಕಚೇರಿಯಲ್ಲಿ ಗುತ್ತಿಗೆದಾರರಾದ ಉಮೇಶ್ ಮತ್ತು ಸತೀಶ್ ಅವರಿಂದ 15 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿ ಅನಿಲ್ ರಾಥೋಡ್ ನೇತೃತ್ವದ ತಂಡ ದಾಳಿ ಮಾಡಿ ಮಂಜುನಾಥ್ ಅವರನ್ನು ಬಂಧಿಸಿದೆ.