
ಬೆಂಗಳೂರು: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.
ಯಲಹಂಕದಲ್ಲಿರುವ ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ನಿವಾಸದಲ್ಲಿ ಪರಿಶೀಲನೆ ನಡೆಸಲಾಗಿದೆ. ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪದ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಕೋಲಾರ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವೆಂಕಟೇಶಪ್ಪನವರಿಗೆ ಸೇರಿದ ಐದು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಬಂಗಾರಪೇಟೆ ಪಟ್ಟಣದ ಮೂರು ಕಡೆ ದಾಳಿ ನಡೆದಿದೆ. ಮುಳಬಾಗಿಲು ತಾಲೂಕಿನ ತಿಪ್ಪದೊಡ್ಡಿ ಗ್ರಾಮದ ಎರಡು ಕಡೆ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.