ಬೆಂಗಳೂರು: ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಚೀಫ್ ಜನರಲ್ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಾಗರಾಜ್ ಎಂ.ಎಲ್. ಲೋಕಾಯುಕ್ತ ಬಲೆಗೆ ಬಿದ್ದ ಚೀಪ್ ಜನರಲ್ ಮ್ಯಾನೇಜರ್ ಆಗಿದ್ದಾರೆ. ಕಾರ್ ಚಾಲಕನ ಮೂಲಕ 7.5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗುತ್ತಿಗೆದಾರ ಪ್ರತಾಪ್ ಎಂಬುವರಿಂದ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಾಗರಾಜ್ ಮತ್ತು ಕಾರ್ ಚಾಲಕ ಮುರಳಿ ಕೃಷ್ಣನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಕಮರ್ಷಿಯಲ್ ನಿಂದ ಇಂಡಸ್ಟ್ರಿಯಲ್ ಎಲೆಕ್ಟ್ರಿಕಲ್ ಸಪ್ಲೈಗೆ ಬದಲಾವಣೆ ಮಾಡಲು ಲಂಚ ಸ್ವೀಕರಿಸುತ್ತಿದ್ದರು. 7.5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಾಹಿತಿ ಆಧರಿಸಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.