ಬೆಳಗಾವಿ: ಲಂಚ ಸ್ವೀಕರಿಸುತ್ತಿದ್ದ ಬೆಳಗಾವಿ ವಿಭಾಗ ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತೆ ದಾಕ್ಷಾಯಿಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜಿಎಸ್ಟಿಗೆ ಸಂಬಂಧಿಸಿದ ಪ್ರಕರಣ ಇತ್ಯರ್ಥಗೊಳಿಸಲು 25,000 ರೂ.ಗೆ ಬೇಡಿಕೆ ಇಟ್ಟಿದ್ದರು. ವಿಕಾಸ್ ಎಂಬುವವರಿಂದ ಹಣ ಪಡೆಯುವ ವೇಳೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.