ಹಾಸನ: ಲಂಚಕ್ಕೆ ಕೈಯೊಡ್ಡಿದಾಗಲೇ ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೆ.ಆರ್.ವೆಂಕಟೇಶ್ ಲೋಕಾಯುಕ್ತ ಬಲೆಗೆ ಬಿದ್ದವರು.
ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್ ಬಿಲ್ ನೀಡಲು ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಹಾಸನಾಂಬಾ ಜಾತ್ರಾ ಮಹೋತ್ಸವದ ಸ್ವಚ್ಚತಾ ಟೆಂಡರ್ ಬಿಲ್ 10.50 ಲಕ್ಷ ರೂ. ಬಿಡುಗಡೆ ಮಾಡಲು ಒಂದುವರೆಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.