alex Certify Lokayukta raid : 3 ಲಕ್ಷ ಲಂಚ ಪಡೆಯುತ್ತಿದ್ದ ‘ನಗರಸಭೆ ಪೌರಾಯುಕ್ತೆ’ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Lokayukta raid : 3 ಲಕ್ಷ ಲಂಚ ಪಡೆಯುತ್ತಿದ್ದ ‘ನಗರಸಭೆ ಪೌರಾಯುಕ್ತೆ’ ಲೋಕಾಯುಕ್ತ ಬಲೆಗೆ

ಚಿತ್ರದುರ್ಗ : ಮನೆಯ ಖಾತೆ ಬದಲಾವಣೆಗೆ 3 ಲಕ್ಷ ಲಂಚ ಪಡೆಯುತ್ತಿದ್ದ ‘ನಗರಸಭೆ ಪೌರಾಯುಕ್ತೆ’ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಲೋಕಾಯುಕ್ತ ಎಸ್ ಪಿ ವಾಸುದೇವರಾಮ ನೇತೃತ್ವದಲ್ಲಿ ದಾಳಿ ನಡೆದಿದ್ದು, 3 ಲಕ್ಷ ಲಂಚ ಪಡೆಯುತ್ತಿದ್ದ ಪೌರಾಯುಕ್ತೆ ಲೀಲಾವತಿ ಲೋಕಾಯುಕ್ತೆ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಪೌರಾಯುಕ್ತೆ ಲೀಲಾವತಿ, ಬಿಲ್ ಕಲೆಕ್ಟರ್ ನಿಷಾಂತ್ ಇಬ್ಬರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಲಂಚ ಪಡೆಯುತ್ತಿದ್ದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

ಬೀದರ್ :  ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಚಾರ್ಯ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪ್ರಾಚಾರ್ಯ ಶಂಕರ ಜೋಗೆ 25,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಯಲ್ಲದಗುಂಡಿ ಗ್ರಾಮದ ನಾಗನಾಥ ಪೂಜಾರಿ ಅವರ ಮಗನ ಆರನೇ ತರಗತಿ ಪ್ರವೇಶಕ್ಕೆ ಪ್ರಾಚಾರ್ಯ ಶಂಕರ 40,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತಾಗಿ ನಾಗನಾಥ ಪೂಜಾರಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಗುರುವಾರ 25 ಸಾವಿರ ರೂ. ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...