alex Certify BIG NEWS: ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಮೈಸೂರು, ಧಾರವಾಡ, ಬೀದರ್ ನಲ್ಲಿಯೂ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಮೈಸೂರು, ಧಾರವಾಡ, ಬೀದರ್ ನಲ್ಲಿಯೂ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಬೆಳಗಾವಿ, ಮೈಸೂರು, ಧಾರವಾದ, ಬೀದರ್ ನಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದು, ಹಲವು ಅಧಿಕಾರಿಗಳ ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಬೋರಗಾಂವ್ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಡವಳೇಶ್ವರ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಮೈಸೂರಿನಲ್ಲಿ ನಗರ ಪಾಲಿಕೆ ವಲಯ ಆಯುಕ್ತ ನಾಗೇಶ್ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಶ್ರೀರಂಗಪಟ್ಟಣದ, ಧಾರವಾದದಲ್ಲಿಯೂ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೀದರ್ ನಲ್ಲಿ ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ರವೀಂದ್ರ ರೊಟ್ಟೆ ಮನೆ, ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...