ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಕೆಎಎಸ್ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೆಎಎಸ್ ಅಧಿಕಾರಿ ರಘುನಾಥ್ ಮತ್ತು ಭೂಸ್ವಾಧೀನ ಅಧಿಕಾರಿ ವಿಜಯ್ ಅವರು ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ.
ಜಮೀನು ಸಂಬಂಧ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಲೋಕಾಯುಕ್ತ ಡಿ.ವೈ.ಎಸ್.ಪಿ. ಪ್ರದೀಪ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರಿನ ಕೆಐಎಡಿಬಿ ಕಚೇರಿಯಲ್ಲಿ ದಾಳಿ ನಡೆಸಲಾಗಿದೆ.