ಬೆಂಗಳೂರು: ಮಂಡ್ಯ, ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿ ಪಿಡಬ್ಲ್ಯೂಡಿ ಅಧಿಕಾರಿ ಹರ್ಷ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಮಂಡ್ಯ ಲೋಕೋಪಯೋಗಿ ಇಲಾಖೆ ಇಇ ಹರ್ಷ ಅವರ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ ಮೇಲೆ ದಾಳಿ ನಡೆಸಲಾಗಿದೆ. ಮಂಡ್ಯ ಜಿಲ್ಲೆಯ ಸಂಬಂಧಿಕರ ಮನೆ, ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ.
ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಹೊಂದಿದ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ತರೀಕೆರೆಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಅವರ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕಡೂರಿನ ನೇತ್ರಾವತಿಯವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.
ಹಾಸನ ಜಿಲ್ಲೆಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಫುಡ್ ಇನ್ಸ್ಪೆಕ್ಟರ್ ಜಗನ್ನಾಥ್ ಮನೆ, ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಅವರ ಸಹೋದರ, ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ಮನೆ ಮೇಲೆಯೂ ದಾಳಿ ನಡೆಸಿ ಪರಿಶೀಲಿಸಲಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.