alex Certify ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಗೆ ಬಿಗ್ ಶಾಕ್: ‘ಲೋಕಾ’ ದಾಳಿ ವೇಳೆ ಪರಾರಿಯಾದ ಅಬಕಾರಿ ಇನ್ಸ್ ಪೆಕ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಗೆ ಬಿಗ್ ಶಾಕ್: ‘ಲೋಕಾ’ ದಾಳಿ ವೇಳೆ ಪರಾರಿಯಾದ ಅಬಕಾರಿ ಇನ್ಸ್ ಪೆಕ್ಟರ್

ಮಂಡ್ಯ: ಲಂಚ ಸ್ವೀಕರಿಸುವಾಗಲೇ ಅಬಕಾರಿ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದ ಅಬಕಾರಿ ಕಚೇರಿಯಲ್ಲಿ ಹೆಡ್ ಕಾನ್ಸ್ಟೇಬಲ್ ದೇವರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸುರೇಶ್ ಎಂಬಾತನಿಂದ 10,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಜಮೀನು ಮಾಲೀಕನ ಹೆಸರು ಕೈಬಿಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಅಬಕಾರಿ ಇನ್ಸ್ ಪೆಕ್ಟರ್ ಗೀತಾ 20,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅವರ ಸೂಚನೆ ಮೇರೆಗೆ ದೇವರಾಜು ಸ್ವೀಕರಿಸುತ್ತಿದ್ದರು. ಈ ವೇಳೆ ಮಂಡ್ಯ ಲೋಕಾಯುಕ್ತ ಎಸ್.ಪಿ. ಸಜೀತ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ದಾಳಿ ವೇಳೆ ಇನ್ಸ್ ಪೆಕ್ಟರ್ ಗೀತಾ ಪರಾರಿಯಾಗಿದ್ದಾರೆನ್ನಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...