ಕಲಬುರಗಿ: ಪೆಟ್ರೋಲ್ ಬಂಕ್ ಗೆ ಎನ್ಒಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗುರುರಾಜ್, ಸಿಬ್ಬಂದಿ ಸೋಪನ್ ರಾವ್ ಲೋಕಾಯುಕ್ತ ಬಲೆಗೆ ಬಿದ್ದವರು. ರಾಜ ರಾಮಪ್ಪ ನಾಯಕ ಅವರಿಂದ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. 20,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಎಸ್ಪಿ ಜಾನ್ ಆ್ಯಂಟನಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.