ಬೆಂಗಳೂರು: ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ಬಡಿದ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಬೆಸ್ಕಾಂ ಜನರಲ್ ಮ್ಯಾನೇಜರ್ ನಾಗರಾಜ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಅವರ ಸಂಬಂಧಿಕರ ಮನೆಗಳ ಮೇಲೆಯೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಕೂಡ್ಲಿಗಿ ಪಟ್ಟಣ, ಗುಡೇಕೋಟೆ ಗ್ರಾಮದಲ್ಲಿ ಅಕ್ರಮ ಆಸ್ತಿ ಆರೋಪ ಹಿನ್ನೆಲೆ ದಾಳಿ ನಡೆಸಲಾಗಿದೆ. ಅಕ್ರಮ ಹಣದಲ್ಲಿ ಪೆಟ್ರೋಲ್ ಬಂಕ್, ಮನೆ, ಜಮೀನು, ಖರೀದಿ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಚಿತ್ರದುರ್ಗ, ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯಲ್ಲಿ ಮೂರು ಕಡೆ ಲೋಕಾಯುಕ್ತ ದಾಳಿ ನಡೆದಿದೆ. ಬಿಬಿಎಂಪಿ ಅಧಿಕಾರಿ ಮಂಜೇಶ್ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮಳವಳ್ಳಿ ತಾಲೂಕಿನ ಹಲಗೂರು, ಗುಂಡಾಪುರ ಗ್ರಾಮದ ಮನೆಗಳು ಮತ್ತು ಮಂಜೇಶ್ ಸಂಬಂಧಿಸಿಕರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮದ್ದೂರು ತಾಲೂಕಿನ ಎಸ್ಐ ಕೋಡಿಹಳ್ಳಿಯಲ್ಲಿ ಮಂಜೇಶ್ ಅವರ ಅಜ್ಜಿ ಮನೆ ಮೇಲೆ ಕೂಡ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.