ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಇಇ ಭಾರತಿ, ಎಇ ಕುನಾಲ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ.
30 ಹೆಚ್.ಪಿ. ಯಿಂದ 60 ಹೆಚ್.ಪಿ.ಗೆ ವಿದ್ಯುತ್ ಹೆಚ್ಚಳಕ್ಕೆ ಅನುಮತಿ ಕೋರಿ ಅನಂತರಾಜು ಎಂಬುವರು ಬೆಸ್ಕಾಂಗೆ ಅರ್ಜಿ ಸಲ್ಲಿಸಿದ್ದು, ವಿದ್ಯುತ್ ಹೆಚ್ಚಳ ಮಾಡಲು ಅಧಿಕಾರಿಗಳು 25,000 ರೂ. ಲಂಚ ಕೇಳಿದ್ದರು. ಅನಂತರಾಜು ದೂರು ನೀಡಿದ್ದು, ಮುಂಗಡವಾಗಿ 20 ಸಾವಿರ ರೂಪಾಯಿ ಪಡೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.