ಬೆಂಗಳೂರು : ಬೆಂಗಳೂರಿನಲ್ಲಿ ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಐಟಿ ದಾಳಿ ಬೆನ್ನಲ್ಲೇ ಲೋಕಾಯುಕ್ತ ಅಧಿಕಾರಿಗಳು ಕೂಡ ದಾಳಿ ನಡೆಸಿ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಬಿಬಿಎಂಪಿ ಉಪ ಹಣಕಾಸು ನಿಯಂತ್ರಕ ಅಧಿಕಾರಿ ಸತ್ಯಮೂರ್ತಿ ನಿವಾಸ ಹಾಗೂ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ ಮನೆಯ ನಿವಾಸದ ಮೇಲೆ ಕೂಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ದೇವಯ್ಯ ಪಾರ್ಕ್ ಬಳಿಯಿರುವ ಲಲಿತಾ ನಿವಾಸ ಹಾಗೂ ವೈಯಾಲಿಕಾವಲ್ ನಲ್ಲಿರುವ ಸತ್ಯಮೂರ್ತಿ ನಿವಾಸದ ಮೇಲೆ ದಾಳಿ ನಡೆಸಲಾಗುತ್ತಿದೆ.ಡಿವೈಎಸ್ ಪಿ ಸುನೀಲ್ ನಾಯಕತ್ವದಲ್ಲಿ 8 ಅಧಿಕಾರಿಗಳನ್ನೊಳಗೊಂಡ ತಂಡ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದೆ.