
ರಾಮನಗರ: ಗುತ್ತಿಗೆದಾರನೊಬ್ಬನಿಂದ 20 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಡಿಒ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಸೋಮದಪ್ಪನಹಳ್ಳಿಯಲ್ಲಿ ನಡೆದಿದೆ.
ಸೋಮದಪ್ಪನಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಮುನಿರಾಜು ಲೋಕಾಯುಕ್ತ ಬಲೆಗೆ ಬಿದ್ದವರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಿದ ಕೆಲಸಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರ ವೆಂಕಟಾಚಲಯ್ಯ ಅವರಿಂದ ಪಿಡಿಒ ಮುನಿರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವೆಂಕಟಾಚಲಯ್ಯ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ವೆಂಕಟಾಚಲಯ್ಯ ಅವರಿಂದ 20 ಸಾವಿರ ಲಂಚ ಪಡೆಯುವಾಗ ಮುನಿರಾಜು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.