ಬೆಂಗಳೂರು: ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಕುಂದಾಣಿ ಗ್ರಾಮ ಪಂಚಾಯಿತಿ ಪಿಡಿಒ ಪದ್ಮನಾಭ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ಕುಂದಾಣಿ ಗ್ರಾಮದ ಪಿಡಿಒ ಪದ್ಮನಾಭ್ ಲೇಔಟ್ ನಲ್ಲಿ ಕೇಬಲ್ ಅಳವಡಿಸಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಮುಂಗಡವಾಗಿ 3 ಲಕ್ಷ ರೂಪಾಯಿ ಲಂಚ ಪಡೆದಿದ್ದರು. ಇಂದು ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪಿಡಿಒ ಪದ್ಮನಾಭ ಲಂಚ ಸ್ವೀಕರಿಸುವಾಗ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.