ಚಿತ್ರದುರ್ಗ: ಚಿತ್ರದುರ್ಗದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.
ಚಿತ್ರದುರ್ಗದಲ್ಲಿ ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯಕ ಮನೆ ಮೇಲೆ ದಾಳಿ ನಡೆಸಲಾಗಿದೆ. ಹಿರಿಯೂರು ಪಟ್ಟಣದ ಚಂದ್ರಾ ಲೇಔಟ್ ನಲ್ಲಿರುವ ಮನೆ, ತವಂದಿ ಗ್ರಾಮದ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮನೆ ಮೇಲೆಯೂ ದಾಳಿ ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ ಅವರ ಹಿರಿಯೂರು ಪಟ್ಟಣದ ಕುವೆಂಪು ನಗರದ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.