alex Certify BREAKING NEWS: ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ಹಲವು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಆದಾಯ ಮೇರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ಸೇರಿದಂತೆ ಹಲವು ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಹೊಳಲ್ಕೆರೆ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಕೆ. ಮಹೇಶ್ ಮಹೇಶ್, ಅವರ ಪತ್ನಿ ಬಿಬಿಎಂಪಿ ಎಇ ಹೆಚ್. ಭಾರತಿ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ದಾವಣಗೆರೆಯ ಜಯನಗರದಲ್ಲಿರುವ ಮಹೇಶ್ ಮನೆ ಮೇಲೆ, ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಸಣ್ಣ ನೀರಾವರಿ ಇಲಾಖೆ, ಬೆಂಗಳೂರಿನ ಬಿಬಿಎಂಪಿ ಕಚೇರಿ ಮೇಲೆಯೂ ದಾಳಿ ನಡೆಸುವ ಸಾಧ್ಯತೆ ಇದೆ.

ಆದಾಯ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...